ಪಾಕ್ ಪರ ಘೋಷಣೆ ; ಕಾಂಗ್ರೆಸ್ ವಿರುದ್ಧ ಬಿಜೆಪಿ ರಣಕಹಳೆ
ಬೆಂಗಳೂರು : ರಾಜ್ಯದ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಭಾರತೀಯ ಜನತಾ ಪಕ್ಷ ರಣಕಹಳೆ ಮೊಳಗಿಸಿದ್ದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮೂಲಕ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸುತ್ತಿದೆ.
ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಇಂದು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರತಿಧ್ವನಿಸುತ್ತಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಯತ್ನ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆ ಜೋರಾಗುತ್ತಿದ್ದು, ಪೊಲೀಸರು ಅನೇಕ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಂತ್ರಿಮಂಡಲದ ಹಲವು ಸಚಿವರು ಘಟನೆಯನ್ನು ಖಂಡಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.
Karnataka, BJP, Congress, KarnatakaAssembly, Nasir Husen, Rajyasaba Ellection,


