Select Page

Advertisement

ಕಾಗವಾಡದಲ್ಲಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು

ಕಾಗವಾಡದಲ್ಲಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು

ಕಾಗವಾಡ : ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ  ಶಿರುಗುಪ್ಪಿ-ಕಾಗವಾಡ  ಮಾರ್ಗದ ರಸ್ತೆಯ ಮಧ್ಯೆ ನಡೆದಿದೆ.

ಈ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಉಮೇಶ್ ಕಾಳೆ (46) ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿ.

ಬೆಳಗಾವಿಯಿಂದ ಮಹಾರಾಷ್ಟ್ರ ಕಡೆ ಸಂಚರಿಸುತ್ತಿದ್ದ ಕಾರು ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರ ರಾಜ್ಯದ ಮಿರಜ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!