Select Page

Advertisement

ಇಂದು ಬೆಳಗಾವಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ‌ ; ಟಿಕೆಟ್ ಕುರಿತು ಮಹತ್ವದ ಸಭೆ

ಇಂದು ಬೆಳಗಾವಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ‌ ; ಟಿಕೆಟ್ ಕುರಿತು ಮಹತ್ವದ ಸಭೆ

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜೊತೆ ಸಭೆ ನಡೆಸುವ ಉದ್ದೇಶದಿಂದ ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾಹಿತಿ ನೀಡಿದರು.

ಭಾನುವಾರ ಬೆಳಗಾವಿ ನಗರದ ಖಾಸಗಿ ಹೊಟೆಲ್ ನಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ‌ ಮಾತನಾಡಿದ ಇವರು.
ಸೋಮವಾರ ರಾತ್ರಿ 8 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ನಡ್ಡಾ, ಬೆಳಗಾವಿಯ ‌ಐಟಿಸಿ ವೆಲ್​ಕಮ್​​​​​ ಹೋಟೆಲ್​ನಲ್ಲಿ ರಾತ್ರಿ 9 ಗಂಟೆಗೆ ನಾಲ್ಕು (ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ) ಲೋಕಸಭಾ ಕ್ಷೇತ್ರಗಳ ಕೋರ್​ ಕಮಿಟಿ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳು, ಸಂಸದರು, ಶಾಸಕರು, ಪ್ರಮುಖರು ಭಾಗಿಯಾಗಲಿದ್ದಾರೆ ಬಳಿಕ ಮಾರ್ಚ್ 5ರಂದು ಬೆಳಗ್ಗೆ 11ಗಂಟೆಗೆ ಚಿಕ್ಕೋಡಿಯಲ್ಲಿ ನಡೆಯುವ ಭೂತಮಟ್ಟದ ಸಮಾವೇಶ ಮತ್ತು ಅದೇ ದಿನ ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ನಡೆಯುವ ‌ಬುದ್ಧಿಜೀವಿಗಳ ಸಮಾವೇಶದಲ್ಲಿ ಭಾಗಿಯಾಗಿ, ಸಂಜೆ ಬೆಳಗಾವಿಯಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದರು.

ಚಿಕ್ಕೋಡಿಯಲ್ಲಿ ಕಾರ್ಯಕರ್ತರ ಸಮಾವೇಶ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬಲಿದ್ದಾರೆ. ಇನ್ನು ರಾಷ್ಟ್ರಾಧ್ಯಕ್ಷರ ಭೇಟಿ ವೇಳೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ರಾಷ್ಟ್ರಾಧ್ಯಕ್ಷರ ಮುಂದೆ ಟಿಕೆಟ್ ಬೇಡಿಕೆ ಇಡುವ ಸಾಧ್ಯತೆ ಇದೆ.

Advertisement

Leave a reply

Your email address will not be published. Required fields are marked *

error: Content is protected !!