Select Page

Advertisement

ಉತ್ತರ ಕನ್ನಡದಿಂದ ಸೂಲಿಬೆಲೆ ಫಿಕ್ಸ್…? ಚಕ್ರವರ್ತಿ Vs ಅಂಜಲಿ ಸಾಧ್ಯತೆ

ಉತ್ತರ ಕನ್ನಡದಿಂದ ಸೂಲಿಬೆಲೆ ಫಿಕ್ಸ್…? ಚಕ್ರವರ್ತಿ Vs ಅಂಜಲಿ ಸಾಧ್ಯತೆ

ಶಿರಸಿ : ಬಿಜೆಪಿ ಭದ್ರಕೋಟೆಯಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಹೊಸ ಅಭ್ಯರ್ಥಿ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದ್ದು, ಚಿಂತಕ ಚಕ್ರವರ್ತಿ ಸೂಲಿಬೆಲೆ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ.

ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು ಇವರ ಜಾಗದಲ್ಲಿ ಮತ್ತೊಬ್ಬ ಹಿಂದೂಪರ ಕಾರ್ಯಕರ್ತ ಹಾಗೂ ನರೇಂದ್ರ ಮೋದಿ ಪರ ಪ್ರಚಾರ ಮಾಡುವ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕೆ ಇಳಿಸುವ ಚಿಂತನೆ ನಡೆದಿದೆ ಎನ್ನಲಾಗಿದೆ.

ಚುನಾವಣೆ ಸ್ಪರ್ಧೆ ಕುರಿತು ಮೊದಲಬಾರಿಗೆ ಅಭಿಪ್ರಾಯ ಹಂಚಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಅವಕಾಶ ಸಿಕ್ಕರೆ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದು ಹೇಳಿದ್ದರು. ಮೊದಲಬಾರಿಗೆ ಚುನಾವಣೆ ಸ್ಪರ್ಧೆ ಕುರಿತು ಚಕ್ರವರ್ತಿ ಸೂಲಿಬೆಲೆ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬೆಳಗಾವಿಯ ಎರಡು ವಿಧಾನಸಭಾ ಕ್ಷೇತ್ರಗಳೂ ವ್ಯಾಪ್ತಿಗೆ ಬರುತ್ತವೆ. ಈ ಬಾರಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಒಂದುವೇಳೆ ಅಂಜಲಿ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದೇ ಆದರೆ ಕದಣ ಕುತೂಹಲ ಮತ್ತಷ್ಟು ರಂಗೇರುವ ಸಾಧ್ಯತೆ ಇದೆ.

Advertisement

Leave a reply

Your email address will not be published. Required fields are marked *

error: Content is protected !!