Select Page

Advertisement

ಸಚಿವೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಫೈನಲ್ ; ಡಿಕೆಶಿ ಭೇಟಿಯಾದ ಕುಟುಂಬ

ಸಚಿವೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಫೈನಲ್ ; ಡಿಕೆಶಿ ಭೇಟಿಯಾದ ಕುಟುಂಬ

ಬೆಳಗಾವಿ : ಕುಂದಾನಗರಿ ಲೋಕಸಭಾ ಅಖಾಡಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸಚಿವೆ ಹೆಬ್ಬಾಳ್ಕರ್ ಪುತ್ರ ಮೃನಾಲ್ ಅವರ ಹೆಸರು ಖಚಿತವಾದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ ಅವರನ್ನು ಭೇಟಿಯಾಗಿ ಹೆಬ್ಬಾಳ್ಕರ್ ಕುಟುಂಬದವರು ಆಶಿರ್ವಾದ ಪಡೆದರು.

ಬೆಳಗಾವಿ ಲೋಕಸಭಾ ಕ್ಷೇತ್ರ ಗೆಲ್ಲಲು ಈ ಬಾರಿ ಕಾಂಗ್ರೆಸ್ ಪೈಪೋಟಿ ನಡೆಸಿದ್ದು ಯುವ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ರಣತಂತ್ರ ಹೆಣೆದಿದೆ. ಕಳೆದ ಹಲವು ವರ್ಷಗಳಿಂದ ಬೆಳಗಾವಿ ಕಾಂಗ್ರೆಸ್ ಘಟಕದಲ್ಲಿ ಸಕ್ರಿಯವಾಗಿ ಕೆಲಸ ಮಾಡಿರುವ ಮೃನಾಲ್ ಅವರಿಗೆ ಕೈ ಟಿಕೆಟ್ ನೀಡಲಾಗಿದೆ.

ಸೌಮ್ಯ ಸ್ವಭಾವದ ಮೃನಾಲ್ ಹೆಬ್ಬಾಳ್ಕರ್ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮವಹಿಸಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ.

Advertisement

Leave a reply

Your email address will not be published. Required fields are marked *

error: Content is protected !!