Video : ಪರೀಕ್ಷೆಯಲ್ಲಿ ತಂಗಿಗೆ ಕಾಪಿ ಮಾಡಲು ಬಿಡದಿದ್ದಕ್ಕೆ ಪೊಲೀಸ್ ಮೇಲೆ ಕಲ್ಲಿನಿಂದ ಹಲ್ಲೆ
ಕಲಬುರಗಿ : ತನ್ನ ತಂಗಿಗೆ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಬಿಡದ ಕಾರಣ ಪೊಲೀಸ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಅಪ್ಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ನಡೆದಿದೆ.
ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಯುವಕ ಕೈಲಾಸ್ ಎಂಬಾತ ನಕಲು ಚೀಟಿ ನೀಡುತ್ತಿದ್ದ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸ್ ಪೇದೆ ಪಂಡಿತ್ ಪಾಂಡ್ರೆ ಎಂಬುವವರು ಅವಕಾಶ ನೀಡಿಲ್ಲ. ಇಷ್ಟಕ್ಕೆ ಕೋಪಗೊಂದ ಯುವಕ ಪೊಲೀಸ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ.
ಸಧ್ಯ ಪೊಲೀಸ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರೀಕರಣವಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೂ ಈ ಘಟನೆ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿತರಾದ ಕೈಲಾಸ್ ಮತ್ತು ಸಮೀರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


