ಭೀಕರ ರಸ್ತೆ ಅಪಘಾತ ; ಬಸ್ ಪಲ್ಟಿಯಾಗಿ 6 ಜನ ಸಾವು
ಪುರಿ: ಓಡಿಸ್ಸಾದ ಜಾಜ್‌ಪುರ್ ಜಿಲ್ಲೆಯಿಂದ ಕೊಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದಿದ್ದು ಆವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
40 ಜನರಿದ್ದ ಬಸ್ ಪುರಿಯಿಂದ ಕಲ್ಕತ್ತಾಗೆ ತೆರಳುತ್ತಿತ್ತು. ಈ ವೇಳೆ ಬಸ್ ಆಯತಪ್ಪಿ ಸೇತುವೆಗೆ ಬಿದ್ದಿದೆ.
ನಿನ್ನೆ ರಾತ್ರಿ 9 ಗಂಟೆಗೆ ಈ ಅವಘಡ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಓರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದು, ನಿಧನರಾದವರ ಕುಟುಂಬಸ್ಥರಿಗೆ ತಲಾ 3 ಲಕ್ಷ ರೂಪಾಯಿ ನೀಡಿದ್ದಾರೆ.


