Select Page

Advertisement

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿಎಂ ಆಗುವ ಯೋಗ ಬರಲಿದೆ ‌: ಪ್ರದೀಪ್ ಈಶ್ವರ್

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿಎಂ ಆಗುವ ಯೋಗ ಬರಲಿದೆ ‌: ಪ್ರದೀಪ್ ಈಶ್ವರ್

ಬೆಳಗಾವಿ : ಮಹಿಳಾ ಮೀಸಲಾತಿ ಜಾರಿಗೆ ಬಂದರೆ ನಮ್ಮ ಲಕ್ಷ್ಮೀ ಮೇಡಂ ಅವರಿಗೆ  ಮುಖ್ಯಮಂತ್ರಿ ಆಗುವ ಯೋಗವು ಬರಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜೊತೆಗೂಡಿ  ಕೆಎಲ್ಇ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು, ಆಯುರ್ವೇದ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತಯಾಚಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಮೃಣಾಲ್‌ ಹೆಬ್ಬಾಳಕರ್ ಅವರಿಗೆ ಇನ್ನು 40-50 ವರ್ಷ ರಾಜಕೀಯ ಮಾಡುವ ಹಂಬಲವಿದೆ. ಗೆದ್ದಮೇಲೆ ಎಲ್ಲರಿಗೂ ಸ್ಪಂದಿಸುವ ವ್ಯಕ್ತಿ.‌ ತಾಯಿಯಂತೆ ಅಭಿವೃದ್ಧಿ ಬಗ್ಗೆ ಕನಸು ಕಟ್ಟಿಕೊಂಡಿದ್ದಾನೆ. ಇಡೀ ದೇಶದ ಅತಿ ದೊಡ್ಡ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಈ ಯೋಜನೆ ಜಾರಿಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೊಡುಗೆ ಅಪಾರ ಎಂದರು.‌

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ಅವರು ಅಭಿವೃದ್ಧಿಗೆ ಜೊಡೆತ್ತಿನಂತೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಪಂಚ ಗ್ಯಾರಂಟಿಗಳು ರಾಜ್ಯದ ಬಡವರ ಬದುಕಿಗೆ ಆಧಾರವಾಗಿವೆ. ಬೆಲೆ ಏರಿಕೆ ಹಾಗೂ ಕೇಂದ್ರದ ರೈತ ವಿರೋಧಿ ನೀತಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಗ್ಯಾರಂಟಿ ಬಡವರ ಕೈ ಹಿಡಿದಿವೆ ಎಂದರು.

ದೇಶ‌ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಆಹಾರ‌ ಭದ್ರತಾ ಕಾಯ್ದೆ ತಂದಿದ್ದು ನಾವು, ಸರ್ಕಾರದ ಸ್ವಾಮ್ಯದ ಕಂಪನಿಗಳು, ರೈಲ್ವೆ, ಐಐಟಿ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯಗಳನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯ ನಂತರದಲ್ಲಿ ಭಾರತದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಸಾಕಷ್ಟು ಶ್ರಮಿಸಿದೆ. ಮುಂಬರುವ ದಿನಗಳಲ್ಲಿ ಜನರ ಅಭಿವೃದ್ಧಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು‌ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಬೆಳಗಾವಿ ಕೇವಲ ಮಾತಿಗಷ್ಟೇ ಎರಡನೇ ರಾಜಧಾನಿ ಆಗಬಾರದು. ಅಭಿವೃದ್ಧಿಯಲ್ಲೂ ಜಿಲ್ಲೆ ಬೆಳೆಯಬೇಕು. ಇಲ್ಲಿನ ಯುವಕರಿಗೆ ಉದ್ಯೋಗ ಹಾಗೂ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ.

ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೋ.ರಾಜೀವ್ ಗೌಡ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಕೆಎಲ್ ಇ ವಿವಿಯ ಆಜೀವ ಸದಸ್ಯರಾದ ಡಾ.ವಿ.ಎಸ್. ಸಾಧುನವರ್ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!