ಚಿಕ್ಕೋಡಿ : ಲೋಕಸಭಾ ಚುನಾವಣೆ ಮುಗಿದು ಮತದಾರರು ಫಲಿತಾಂಶಕ್ಕಾಗಿ ಕಾಯುತ್ತಿದ್ದರೆ ಇತ್ತ ಪಕ್ಷಗಳ ಕಾರ್ಯಕರ್ತರು ಗೆಲುವಿನ ಜಗಳದಲ್ಲಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕೋಡಿಯಲ್ಲಿ ಲೋಕಸಭಾ ಚುನಾವಣೆ ಬೆಟ್ಟಿಂಗ್ ವಿಚಾರವಾಗಿ ಗಲಾಟೆ ನಡೆದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಚಪ್ಪಲಿಯಿಂದ ಬಡದಾಡಿಕೊಂಡಿದ್ದಾರೆ.
ಎಣ್ಣೆ ಏಟಲ್ಲಿ ಇದ್ದ ಇವರು ಚುನಾವಣಾ ಫಲಿತಾಂಶ ಕುರಿತು ಚರ್ಚೆ ಮಾಡಿಕೊಳ್ಳುತ್ತಾ ಹೊಡೆದಾಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ, ತಮ್ಮ ಪಕ್ಷಗಳ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಜಗಳ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದಿದ್ದು ನಡು ರಸ್ತೆಯಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಸಧ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಕಣಕ್ಕೆ ಇಳಿದಿದ್ದರೆ ಅತ್ತ ಕಾಂಗ್ರೆಸ್ ನಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನಲೆಯಲ್ಲಿ ಕ್ಷೇತ್ರ ಕುತೂಹಲ ಮೂಡಿಸಿದೆ.


