ಬೆಳಗಾವಿ : ಠಾಣೆಯಲ್ಲಿ ಕರ್ತವ್ಯನಿರತ ಪೊಲೀಸ್ ‌ಪೇದೆ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಿಬ್ಬಂದಿಯನ್ನು ಅಮಾನತು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.

ಅಂಕಲಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ರಾಮಚಂದ್ರ ಖೋತ್ ಎಂಬಾತ ಎಣ್ಣೆ ಪಾರ್ಟಿ‌ ಮಾಡಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದವು.

ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ್ ಅವರು ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.