Select Page

Advertisement

Video – ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಸವದಿ‌ ಬೆಂಬಲಿಗರು

Video – ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಸವದಿ‌ ಬೆಂಬಲಿಗರು

ಅಥಣಿ : ಚಿಕ್ಕೋಡಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಥಣಿ‌ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಲೀಟ್ ಕೊಟ್ಟ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ‌ ಆರೋಪಕ್ಕೆ ಲಕ್ಷ್ಮಣ ಸವದಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ನಂತರ ಅಥಣಿ ಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅಥಣಿಯಲ್ಲಿ ನಮ್ಮ ನಂಬಿಕೆಗೆ ಮೋಸವಾಗಿದೆ. ಇಲ್ಲಿನ ಶಾಸಕರು ನಮಗೆ ಕೈ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಸಧ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಣ ಸವದಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದು ಶನಿವಾರ ಅಥಣಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸವದಿ ಪರ ಅಪಾರ ಅಭಿಮಾನಿಗಳು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಚಿವ ಸತೀಶ್ ಹೇಳಿಕೆ ವಾಪಸ್ ಒಡೆಯುವಂತೆ ಆಕ್ರೋಶ ಹೊರಹಾಕಿದರು.

ಲೋಕಸಭಾ ಚುನಾವಣಾ ಫಲಿತಾಂಶ ಬಂದು ಐದು ದಿನ ಕಳೆದರು ನಾಯಕರ ನಡುವಿನ ಗುದ್ದಾಟ ನಿಂತಿಲ್ಲ. ಇತ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರು ಕೆಲ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮದೇ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ಇದು ಮುಂದೆ ಯಾವ ಸ್ವರೂಪ ತಾಳುತ್ತದೆ ಎಂದು ಕಾದು ನೋಡಬೇಕು.

Advertisement

Leave a reply

Your email address will not be published. Required fields are marked *

error: Content is protected !!