Select Page

Advertisement

ಜಾರಕಿಹೊಳಿ ವಿರುದ್ಧ ತೊಡೆತಟ್ಟುವರಾ ಅಥಣಿ ಸಾಹುಕಾರ್ ; ಸವದಿ ನಿವಾಸದಲ್ಲಿ ಗೌಪ್ಯ ಸಭೆ

ಜಾರಕಿಹೊಳಿ ವಿರುದ್ಧ ತೊಡೆತಟ್ಟುವರಾ ಅಥಣಿ ಸಾಹುಕಾರ್ ; ಸವದಿ ನಿವಾಸದಲ್ಲಿ ಗೌಪ್ಯ ಸಭೆ

ಅಥಣಿ : ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ ನಾಯಕರಲ್ಲಿ ಭಿನ್ನಮತದ ಬಿರುಗಾಳಿ ಬೀಸುತ್ತಿದ್ದೆ, ಗುರುವಾರ ಸಚಿವ ಸತೀಶ ಜಾರಕಿಹೊಳಿ ಕಾಂಗ್ರೆಸ್ ಶಾಸಕ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತಿದ್ದಂತೆ ಬೆಳಗಾವಿ ರಾಜಕಾರಣದಲ್ಲಿ ಮಿಂಚಿನ ಸಂಚಲನ ಉಂಟಾಗಿದೆ.

ಅಥಣಿ ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ಶುಕ್ರವಾರ ಕುಡಚಿ ಶಾಸಕ ಮಹೇಂದ್ರ ತಮ್ಮನ್ನವರ ಬೇಟಿ ನೀಡಿ ಒಂದು ಗಂಟೆಗಳ ಕಾಲ ಗುಪ್ತ ಮಾತುಕತೆ ನಡೆಸಿದ್ದು, ಜಿಲ್ಲಾ ರಾಜಕಾರಣದಲ್ಲಿ ಹಲವು ಭಗೆಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಇದರಿಂದ ಮತ್ತೊಂದು ಸುತ್ತಿನ ರಾಜಕೀಯ ಯುದ್ಧ ಆರಂಭಗೊಳ್ಳುವ ಲಕ್ಷಣ ಗೋಚರಿಸುತ್ತಿದೆ.

ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಅಥಣಿ ಶಾಸಕ ಲಕ್ಷ್ಮಣ ಸವದಿ, ಕುಡಚಿ ಶಾಸಕ ಮಹೇಂದ್ರ ತಮ್ಮನ್ನವರ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಸಿದೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಅಥಣಿಯಲ್ಲಿ ಇರುವ ನಿವಾಸಕ್ಕೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ದಿಢೀರ್ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ , ಸತೀಶ್ ಜಾರಕಿಹೊಳಿ ಈ ಇಬ್ಬರು ನಾಯಕರನ್ನೇ ಟಾರ್ಗೆಟ್ ಮಾಡಿ ಬಹಿರಂಗ ಮಾತಿನ ಯುದ್ಧ ಸಾರಿದರು.

ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಬಿಜೆಪಿಗೆ ಬೆಂಬಲಿಸಿದ್ದಾರೆ ಹಾಗೂ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ‌ಂದು ಸಚಿವ ಸತೀಶ ಜಾರಕಿಹೊಳಿ ಕಳೆದ ಮೂರು ದಿನಗಳಿಂದ ಸವದಿ, ತಮ್ಮಣ್ಣವರ ವಿರುದ್ಧ ಸತೀಶ ವಾಗ್ದಾಳಿ ನಡೆಸಿದರು.

ಸತೀಶ್ ಆರೋಪದ ಬೆನ್ನಲ್ಲೇ ಉಭಯ ನಾಯಕರ ಭೇಟಿ, ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮಾತೊಂದು ಕಡೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಈ ಎರಡೂ ಗುಂಪಿನ ಸದಸ್ಯರಿಂದ ಅಂತರ ಕಾಯ್ದುಕೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!