ಮಂಡ್ಯ : ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ಮೃತಪಟ್ಟರು ಬೆಂಗಳೂರು ಮೂಲದ ಬಾಗಲಗುಂಟೆ ನಿವಾಸಿ ದರ್ಶನ್ ( 21 ) ತಾಯಿ ಕಲಾ ( 40 ) ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಮಂಜುನಾಥ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಟುಂಬ ಸಮೇತರಾಗಿ ಮೈಸೂರಿಗೆ ತೆರಳಿದ್ದ ಇವರು ಚಾಮುಂಡಿ ಬೆಟ್ಟಕ್ಕೆ ಭೇಟಿನೀಡಿ ತಾಯಿಯ ದರ್ಶನ ಪಡೆದುಕೊಂಡು ವಾಪಸ್ ಬರುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿನಿಡಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದರು. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.