ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಬೆಳಗಾವಿ : ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಬೆನ್ನಲ್ಲೇ, ಕಳೆದ 20 ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಘಟಪ್ರಭದಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಡ ಕುಟುಂಬದ ಬಾಲಕಿ ಜಮೀನಿಗೆ ಹೋದ ಸಂದರ್ಭದಲ್ಲಿ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಬಾಲಕಿ ಪೋಷಕರು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈಗಾಗಲೇ ನಾಲ್ವರು ಆರೋಪಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.