Select Page

Advertisement

ವಂಚನೆ ಪ್ರಕರಣ ; ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಅರೆಸ್ಟ್

ವಂಚನೆ ಪ್ರಕರಣ ; ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಅರೆಸ್ಟ್

ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುದಾಗಿ ಹೇಳಿ ಉದ್ಯಮಿಯಿಂದ ಐದು ಕೋಟಿ‌ ಹಣ ಪಡೆದು ವಂಚನೆ ಪ್ರಕರಣದ ಪ್ರಮುಖ ಆರೋಪಿ ಸಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಕಾವಿ ಬಟ್ಟೆ ಕಳಚಿ ಪ್ಯಾಂಟ್ ಹಾಗೂ ಟೀ ಶರ್ಟ್ ಹಾಕಿಕೊಂಡು ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಓಡಿಶಾ ರೈಲು ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ದಾರಿಯೂ,

ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.

ಆದರೆ, ಸೆ. 19ರ ಬೆಳಗ್ಗೆ ಬಂದ ಮಾಹಿತಿ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು.

ಸಿಸಿಬಿ ಅಧಿಕಾರಿಗಳು ಸ್ವಾಮಿಜಿಯನ್ನು ಒಡಿಶಾದಿಂದ ಬಂಧಿಸಿದ್ದು ,ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದು ಕೋರ್ಟ್ ಮುಂದೆ ಹಾಜರ್ ಪಡಿಸಲಿದ್ದಾರೆ. ಹಾಲಶ್ರೀ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಜಾಮೀನು ಸಿಗೋ ಮುನ್ನವೇ ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!