
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಬೆಳಗಾವಿ : ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ( ಎಬಿವಿಪಿ ) ನಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಸೋಮವಾರ ನಗರದ ಆರ್ ಪಿ ಡಿ ವೃತ್ತದಲ್ಲಿ ಸೇರಿದ್ದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ರಾಜ್ಯ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಳ ಮಾಡಿ ಬಡ, ಕೂಲಿ ಕಾರ್ಮಿಕರು ಹಾಗೂ ಮಧ್ಯಮವರ್ಗದ ಜನತೆಗೆ ಆರ್ಥಿಕ ಹೊರೆ ಹೇರಿದೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕ್ತಿ ಯೋಜನೆಯಿಂದಾಗಿ ದಿನನಿತ್ಯ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರು ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸರಕಾರ ಕೂಡಲೇ ಬಸ್ ಗಳ ಸಂಖ್ಯೆ ಹೆಚ್ಚಿಸಬೇಕು ಹಾಗೂ
ಪ್ರಯಾಣ ದರ ಏರಿಕೆ ಸೂಚನೆಯನ್ನು ಕೂಡಲೇ ವಾಪಸ್ ಪಡೆಯುವಂತೆ ಅಖಿಲ ಭಾರತೀಯ ವಿದ್ಯಾರ್ಥಿ
ಪರಿಷತ್ ಸದಸ್ಯರು ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಹಿರೇಮಠ್, ನಗರ ಕಾರ್ಯದರ್ಶಿ ರೋಹಿತ ಆಲ್ಕುಂತೆ, ಕುಶಲ ಘೊಡಗೆರಿ, ಪ್ರಶಾಂತ್ ಶೆಲ್ಲಿಕೇರಿ, ಮಂಜುನಾಥ್ ಹಂಚಿನಮನಿ ಸೇರಿದಂತೆ ಇತರರು ಉಪಸ್ಥಿತಿದ್ದರು.