ಭೀಕರ ರಸ್ತೆ ಅಪಘಾತ ; ನಾಲ್ವರು ಸ್ಥಳದಲ್ಲೇ ಸಾವು
ಚಿತ್ರದುರ್ಗ : ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.
ಚಿತ್ರದುರ್ಗ ಜಿಲ್ಲೆ ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಘಟನೆ ಸಂಭವಿಸಿದ್ದು, ಸಂಗನಬಸವ ( ೩೬ ) ರೇಖಾ (೨೯) ಭೀಮಾಶಂಕರ ( ೨೬ ) ಹಾಗೂ ಅಗಸ್ತ್ಯ ( ೭ ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನವರಾಗಿದ್ದು ಖಾಸಗಿ ಬ್ಯಾಂಕ್ ನೌಕರನಾಗಿದ್ದ ಭೀಮಾಶಂಕರ ಅವರ ಕುಟುಂಬ ಪ್ರವಾಸಕ್ಕೆ ಚಿಕ್ಕಮಗಳೂರಿಗೆ ತೆರಳುವಾಗ ಈ ಘಟನೆ ಸಂಭವಿಸಿದೆ.
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದರೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


