
ಕಾಗವಾಡ ಭೀಕರ ಅಪಘಾತ ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

Belagavi – ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಚಿವರು ಧನ್ಯವಾದ ಸಲ್ಲಿಸಿದ್ದಾರೆ.
ಘಟನೆ ಬಗ್ಗೆ ಆಘಾತ ವ್ಯಕ್ತ ಪಡಿಸಿ ರುವ ಸಚಿವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
********************
ಏನಿದು ಘಟನೆ : ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿ ಆಗಿ ಕೂಲಿ ಕೆಲಸಕ್ಕೆ ತೆರಳಿದ್ದ ಮೂವರು ಮಹಿಳೆಯರು ಮೃತಪಟ್ಟ ಘಟನೆ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಶೇಡಬಾಳದ ನಿವಾಸಿಗಳಾದ ಚಂಪಾ ಲಕ್ಕಪ್ಪ ತಳಕ್ಕಟಿ (45), ಭಾರತಿ ವಡ್ಡಾಳೆ (30), ಮಾಲು ರಾವಸಾಬ ಐನಾಪೂರ (55) ಸ್ಥಳದಲ್ಲಿಯೇ ಸಾವಣಪ್ಪಿದ್ದು, ಶೇಕವ್ವಾ ನರಸಪ್ಪ ಸರಸಾಯಿ (38) ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಲಿ ಕೆಲಸಕ್ಕೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ಮಹಿಳೆಯರ ಬದುಕಲ್ಲಿ ದಾರುಣ ಘಟನೆ ಸಂಭವಿಸಿದೆ. ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೇಲರ್ ಗಾಲಿ ಬಿಚ್ಚಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಇನ್ನೂ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ರಾಜು ಕಾಗೆ ಸ್ಥಳಕ್ಕೆ ಭೇಟಿ ನೀಡಿ ಗಾಯಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದಾರೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.