Select Page

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ಪಲ್ವಿ : ಓರ್ವ ಯುವಕ ಸಾವು

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ಪಲ್ವಿ : ಓರ್ವ ಯುವಕ ಸಾವು

ಬಾಗಲಕೋಟೆ : ದಾವಣಗೆರೆಯಲ್ಲಿ ಆಗಸ್ಟ್ 3 ರಂದು
ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಓರ್ವ ಯುವಕ ಮೃತಪಟ್ಟ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದಲ್ಲಿ ಸಂಭವಿಸಿದೆ.

ಇನ್ನು ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

::::::::::ಸಿದ್ದರಾಮಯ್ಯ ಸಂತಾಪ ::::::::

ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ‌ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು. ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು  ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ. ನಿಮ್ಮ ಜೀವ ನಮಗೆ‌ ಮಾತ್ರವಲ್ಲ ನಿಮ್ಮನ್ನು ನಂಬಿರುವ ಕುಟುಂಬಕ್ಕೂ ಅಷ್ಟೇ ಅಮೂಲ್ಯ ಎಂಬ ಅರಿವಿರಲಿ.

Advertisement

Leave a reply

Your email address will not be published. Required fields are marked *

error: Content is protected !!