ಲಕ್ಷ್ಮಣ ಸವದಿ ಕಾರು ಅಪಘಾತ : ಓಡೋಡಿ ಬಂದ ಶಾಸಕ ಕುಮಠಳ್ಳಿ
ಹಾರೂಗೇರಿ : ಕಾರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾರೂಗೇರಿ ನಾರಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ ಓಡೋಡಿ ಬಂದು ಆರೋಗ್ಯ ವಿಚಾರಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಪಿ.ರಾಜೀವ್, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಶ್ರೀ ಪರಪ್ಪ ಸವದಿ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
**********
::::::: ಘಟನೆ ವಿವರ ::::::::
ಹಾರೂಗೇರಿ : ಮಾಜಿ ಡಿಸಿಎಂ ಹಾಗೂ ಪರಿಷತ್ ಸದಸ್ಯ ಲಕ್ಮಣ ಸವದಿ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದೆ.
ಅಥಣಿ ಇಂದ ಗೋಕಾಕ್ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಹಾರೂಗೇರಿ ಏಕಲವ್ಯ ಕಾಲೇಜು ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.