
ಸಂಕೇಶ್ವರ ಬಳಿ ರಸ್ತೆ ಮಧ್ಯೆ ಬಸ್ ಗೆ ಬೆಂಕಿ

ಬೆಳಗಾವಿ : ಹುಕ್ಕೇರಿ ತಾಲೂಕಿನ ಸಂಕೇಶ್ವರ ಟೂಲ್ ಬಳಿ ನಡು ರಸ್ತೆಯಲ್ಲೇ ಬಸ್ ಗೆ ಬಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಗುರುವಾರ ಸಂಭವಿಸಿದೆ.
ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಮಾತ್ರದಲ್ಲಿ ಚಾಲಕ ಹಾಗೂ ನಿರ್ವಾಹಕ ಸಮಯಪ್ರಜ್ಞೆ ಮೆರೆದಿದ್ದಾರೆ. ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದು ಬಸ್ ಬೆಂಕಿಗೆ ಆಹುತಿಯಾಗಿದೆ.
ಸ್ಥಳಕ್ಕೆ ಅಗ್ನೀಶಾಮಕ ದಳ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಒಟ್ಟಿನಲ್ಲಿ ದೊಡ್ಡ ಅನಾಹುತ ತಪ್ಪಿದೆ.