Select Page

Advertisement

Breaking – ಭೀಕರ ಅಪಘಾತದಲ್ಲಿ ಮೃತಪಟ್ಟವರೆಲ್ಲ ಅಥಣಿಯವರು ; ಒಂದೇ ಕುಟುಂಬದ ನಾಲ್ವರು ಬಲಿ

Breaking – ಭೀಕರ ಅಪಘಾತದಲ್ಲಿ ಮೃತಪಟ್ಟವರೆಲ್ಲ ಅಥಣಿಯವರು ; ಒಂದೇ ಕುಟುಂಬದ ನಾಲ್ವರು ಬಲಿ

ಆಂಧ್ರಪ್ರದೇಶದ : ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂದ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ನಿವಾಸಿಗಳಾದ ಹನುಮಂತ ಆಜೂರ ( 52 )
ಮಾನಂದಾ ಆಜೂರ (46), ಶೋಭಾ ಆಜೂರ (36)
ಅಬೀಕಾ ಆಜೂರ (19), ಮಣಮಂತ ಜಾಧವ್ ( 52 )
ಮೃತಪಟ್ಟ ದುರ್ದೈವಿಗಳು. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ.

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ 16 ಭಕ್ತರು ಕ್ರೂಸರ್ ವಾಹನದಲ್ಲಿ ಕಡಪದಿಂದ ಚಿತ್ತೂರಿಗೆ ಪ್ರಯಾಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ.

ಅಪಘಾತದಲ್ಲಿ ಗಾಯಗೊಂಡವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಎಂದು ಪೊಲೀಸ್ ಅಧಿಕಾರಿ ನಾಗಬಾಬು ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!