ಜಡ್ಜ್ ಮುಂದೆ ಕಣ್ಣೀರಿಟ್ಟ ನಟ ದರ್ಶನ್ ; ಆರೋಪಿಗಳು ಪೊಲೀಸ್ ಕಸ್ಟಡಿಗೆ
ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಎರಡನೇ ಪತ್ನಿ ಪವಿತ್ರ ಗೌಡ ಸೇರಿ 10 ಆರೋಪಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ತಪಾಸಣೆ ಬಳಿಕೆ ಕೋರ್ಟ್ ಗೆ ಆರೋಪಿತರನ್ನು ಹಾಜರು ಮಾಡಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ನಟ ದರ್ಶನ್ ಹಾಗೂ ನಟಿ ಪವಿತ್ರ ಗೌಡ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಆರೋಪಿತರನ್ನು ಮೂರು ದಿನಗಳ ವರೆಗೆ ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಬಂಧಿತರು ನಟ ದರ್ಶನ್ ಹೆಸರು ಬಾಯಿಬಿಟ್ಟಿದ್ದರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಒಟ್ಟು 10 ಜನರನ್ನು ಬಂಧನಕ್ಕೊಳಪಡಿಸಲಾಗಿದೆ.
ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳಿಸಿದ್ದ ಕಾರಣಕ್ಕೆ ರೇಣುಕಸ್ವಾಮಿಯವರ ಕೊಲೆ ನಡೆದಿದ್ದು, ದರ್ಶನ್ ಅವರ ಮೌಖಿಕ ಆದೇಶದ ಮೇಲೆ ಆರೋಪಿಗಳು ಈ ಹತ್ಯೆಯನ್ನು ನಡೆಸಿದ್ದಾರೆಂದು ಹೇಳಲಾಗಿದೆ.
ದರ್ಶನ್ ಜೊತೆಗೆ ಆತ್ಮೀಯ ಸಂಪರ್ಕ ಹೊಂದಿದ್ದ ನಟಿ ಪವಿತ್ರಾ ಗೌಡ, ಈ ಬಗ್ಗೆ ದರ್ಶನ್ ಅವರಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದರು. ಇದರಿಂದ ಕುಪಿತರಾಗಿದ್ದ ದರ್ಶನ್ ರೇಣುಕಾಸ್ವಾಮಿ ಬಗ್ಗೆ ಕೋಪ ತಾಳಿದ್ದರು.