Select Page

ನಟ ದರ್ಶನ್ ಪ್ರಕರಣಕ್ಕೆ ಟ್ವಿಸ್ಟ್ ; ಹಾಸ್ಯನಟ ಚಿಕ್ಕಣ್ಣನಿಗೆ ನೋಟಿಸ್ ನೀಡಲು ಪೊಲೀಸ್ ತಯಾರಿ

ನಟ ದರ್ಶನ್ ಪ್ರಕರಣಕ್ಕೆ ಟ್ವಿಸ್ಟ್ ; ಹಾಸ್ಯನಟ ಚಿಕ್ಕಣ್ಣನಿಗೆ ನೋಟಿಸ್ ನೀಡಲು ಪೊಲೀಸ್ ತಯಾರಿ

ಬೆಂಗಳೂರು : ಚಿತ್ರದುರ್ಗದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವುಸ್ಟ್ ಸಿಕ್ಕಿದ್ದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟನಿಗೆ ಈಗ ಸಂಕಷ್ಟ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ನಂತರ ಆತನ ಮೃತದೇಹ ಎಸೆದ ದಿನ ಮೈಸೂರಿಗೆ ತೆರಳಿದ್ದ ನಟ ದರ್ಶನ್ ಹೊಟೇಲ್ ಒಂದರಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಖ್ಯಾತ ನಟನ ಜೊತೆ ಹಾಸ್ಯನಟ ಚಿಕ್ಕಣ್ಣ ಜೊತೆಗಿದ್ದರು ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆಯಾದ ದಿನ ರಾತ್ರಿ ನಟ ದರ್ಶನ್ ಹಾಗೂ ಚಿಕ್ಕಣ್ಣ ಹೊಟೇಲ್ ಒಂದರಲ್ಲಿ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೊಲೆ ಕುರಿತು ಏನಾದರು ಚರ್ಚೆ ಆಗಿದೆಯಾ ಎಂಬ ವಿಚಾರವಾಗಿ ಪೊಲೀಸರು ನಟ ಚಿಕ್ಕಣ್ಣನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

ಈಗಾಗಲೇ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ್ದ ಸಂದರ್ಭದಲ್ಲಿ ನಟ ದರ್ಶನ್ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂಬುದು ಸ್ಪಷ್ಟವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ನೋಟಿಸ್ ನೀಡುವ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *