Select Page

Advertisement

ನಟ ದರ್ಶನ್ ಗೆ ಕೊನೆಗೂ ಸಿಕ್ತು ಜಾಮೀನು ; ಇಂದೇ ಬಿಡುಗಡೆ ಸಾಧ್ಯತೆ

ನಟ ದರ್ಶನ್ ಗೆ ಕೊನೆಗೂ ಸಿಕ್ತು ಜಾಮೀನು ; ಇಂದೇ ಬಿಡುಗಡೆ ಸಾಧ್ಯತೆ

ಬೆಂಗಳೂರು : ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಕೋಟ್೯ ಆದೇಶ ಹೊರಡಿಸಿದ್ದು ಇಂದು ಸಂಜೆ ವೇಳೆಗೆ ನಟ ಬಿಡುಗಡೆ ಆಗುವ ಸಾಧ್ಯತೆ ಇದೆ.

ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಕಳೆದ ಕೆಲ ದಿನಗಳ ಹಿಂದೆ ಕೋರ್ಟ್ ಜಾಮೀನು ನಿರಾಕರಣೆ ಮಾಡಿತ್ತು. ಈ ಹಿನ್ನಲೆಯಲ್ಲಿ ನಟ ದರ್ಶನ್ ಗೆ ಜೈಲುವಾಸ ಅನಿವಾರ್ಯವಾಗಿತ್ತು.

ಸಧ್ಯ ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!