
BREAKING : ನಟ ದರ್ಶನ್ ಜಾಮೀನು ರದ್ದು ; ಮತ್ತೆ ಜೈಲಿಗೆ ಕಿಲ್ಲಿಂಗ್ ಸ್ಟಾರ್

ನವದೆಹಲಿ : ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಸಿಲುಕಿರುವ ನಟ ದರ್ಶನ್ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಕಳೆದ ಕೆಲ ದಿನಗಳಿಂದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದ್ದು, ನಟ ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದು, ದಾಸನಿಗೆ ಮತ್ತೆ ಜೈಲುವಾಸ ಫಿಕ್ಸ್ ಆಗಿದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ ಹೋಗಬೇಕಾದ ಪರಿಸ್ಥಿತಿಗೆ ಎದುರಾಗಿದ್ದು ಆತನ ಗೆಳತಿ ಪವಿತ್ರ ಗೌಡ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇನ್ನೂ ಹೈಕೋರ್ಟ್ ನೀಡಿದ್ದ ಜಾಮೀನು ವಿಚಾರವಾಗಿ ವಿವೇಚನೆ ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇನ್ನೂ ನಟ ದರ್ಶನ್ ಗೆ ಬೆಂಗಳೂರು ಜೈಲಿನಲ್ಲಿ ಸಿಗರೇಟ್ ಸೇದಿದಂತೆ ಐಶಾರಾಮಿ ಸೌಲಭ್ಯ ನೀಡಿದ್ದ ಜೈಲಾಧಿಕಾರಿಯನ್ನು ಅಮಾನತು ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.