
Video – ಎಂಇಎಸ್ ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಡಿಜಿಪಿ ಅಲೋಕ್ ಕುಮಾರ್

ಬೆಳಗಾವಿ : ಅಧಿವೇಶನ ಹಾಗೂ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂದರ್ಭದಲ್ಲಿ ಪುಂಡಾಟಿಕೆ ಮೆರೆಯುವ ಎಂಇಎಸ್ ಗೆ ಎಡಿಜಿಪಿ ಅಶೋಕ್ ಕುಮಾರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಡಿಸೆಂಬರ್ 19 ರಂದು ನಡೆಯಲಿರುವ ಬೆಳಗಾವಿ ಚಳಿಗಾಲ ಅಧಿವೇಶನ ಹಿನ್ನಲೆಯಲ್ಲಿ ಬೆಳಗಾವಿಗೆ ಭೇಟಿ ನೀಡಿದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ. ಅಧಿವೇಶನ ಸಂದರ್ಭ ಸೇರಿದಂತೆ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂದರ್ಭದಲ್ಲಿ ಪುಂಡಾಟಿಕೆ ನಡೆಸುವ ಎಂಇಎಸ್ ಗೆ ಖಡಕ್ ಎಚ್ಷರಿಕೆ ನೀಡಿದ್ದಾರೆ.
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ನಿಟ್ಟಿನಲ್ಲಿ ಯಾರಾದರು ಪುಂಡಾಟಿಕೆ ಮೆರೆದರೆ ಅಂತವರ ಬಾಲ ಕಟ್ ಮಾಡಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದರು.