
ಬೆಳಗಾವಿ ಚಳಿಗಾಲದ ಅಧಿವೇಶನ ದಿನಾಂಕ ನಿಗದಿ

ಬೆಳಗಾವಿ : ಬರುವ ಡಿಸೆಂಬರ್ 19 ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶ ನಡೆಯಲಿದ್ದು ಇಂದು ದಿನಾಂಕ ಪ್ರಕಟ ಮಾಡಲಾಗಿದೆ.
ಡಿಸೆಂಬರ್ 19 ರಿಂದ 29ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಕೈಗೊಂಡಿದ್ದು ಚಳಿಗಾಲ ಅಧಿವೇಶನ ದಿನಾಂಕ ಪ್ರಕಟ ಮಾಡಲಾಗಿದೆ. ಜೊತೆಗೆ ಅಧಿವೇಶನದಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.