BREAKING : ಏರ್ ಇಂಡಿಯಾದ ಇನ್ನೊಂದು ವಿಮಾನ ತುರ್ತು ಭೂಸ್ಪರ್ಶ…!
ಥೈಲ್ಯಾಂಡ್ : ಅಹಮದಾಬಾದ್ ವಿಮಾನ ದುರ್ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇನ್ನೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶವಾಗಿದ್ದು ದಾಖಲಾಗಿದೆ.
ಥೈಲ್ಯಾಂಡ್ ನ ಫುಕೆಟ್ ನಿಂದ ದೆಹಲಿಗೆ ತೆರಳಲಿದ್ದ ಏರ್ ಇಂಡಿಯಾ ವಿಮಾನ AI – 379 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.
ಈ ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಪತ್ರ ಬಹಿರಂಗಪಡಿಸಿರುವ ವ್ಯಕ್ತಿಯನ್ನು ಥೈಲ್ಯಾಂಡ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಿನ್ನೆಯಷ್ಟೇ ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ್ದ ಭೀಕರ ವಿಮಾನ ದುರಂತದಲ್ಲಿ 250 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಜೊತೆಗೆ ಅನೇಕ ವಿದ್ಯಾರ್ಥಿಗಳು ಕಾಣೆಯಾಗಿರುವ ಶಂಕೆ ವ್ಯಕ್ತವಾಗಿದೆ.


