ಭಾರತ ಭಯೋತ್ಪಾದಕರ ಮುಂದೆ ಮಣಿಯುವುದಿಲ್ಲ : ಅಮಿತ್ ಶಾ ಖಡಕ್ ಎಚ್ಚರಿಕೆ
ಶ್ರೀನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಬುಧವಾರ) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಮೃತಪಟ್ಟ 26 ಜನರ ಮೃತದೇಹಗಳಿಗೆ ಪುಷ್ಪಗುಚ್ಛ ಅರ್ಪಿಸಿದ್ದಾರೆ.
ಈ ಹೇಯ ಕೃತ್ಯದ ಅಪರಾಧಿಗಳನ್ನು ಶಿಕ್ಷಿಸುವುದಾಗಿ ಸಂತ್ರಸ್ತರಿಗೆ ಭರವಸೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಶವಪೆಟ್ಟಿಗೆಯ ಮೇಲೆ ಅಮಿತ್ ಶಾ (Amit Shah) ಪುಷ್ಪಗುಚ್ಛಗಳನ್ನು ಇರಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಭಾರವಾದ ಹೃದಯದಿಂದ ಅಂತಿಮ ನಮನ ಸಲ್ಲಿಸಿದೆ. ಭಾರತ ದೇಶವೆಂದೂ ಭಯೋತ್ಪಾದನೆಗೆ ಮಣಿಯುವುದಿಲ್ಲ. ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಅಮಿತ್ ಶಾ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.


