
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಾಧ್ಯಕ್ಷರಾಗಿ ಅಮೀತಕುಮಾರ್ ಆಯ್ಕೆ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅನುಮೋದನೆ ಮೇರಿಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಅಮೀತಕುಮಾರ ಹಿರೇಮಠ ಅವರನ್ನು ಆಯ್ಕೆಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ಸಾಮಾಜಿಕ ಜಾಲತಾಣ ವಿಭಾಗ ಹೊರಡಿಸಿರುವ ಪ್ರಕಟಣೆಯಲ್ಲಿ ಅಮಿತಕುಮಾರ್ ಹಿರೇಮಠ ಅವರಿಗೆ ಜವಾಬ್ದಾರಿ ನೀಡಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮಾರ್ಗದರ್ಶನ, ಹಾಗೂ ಜಿಲ್ಲಾ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ನೀಡಿದೆ. ಈ ಹಿಂದೆ ಅಮಿತಕುಮಾರ್ ಅವರು ಬಿಜೆಪಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಸಧ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.