ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಐಸಿಯು ವಾರ್ಡ್ ಗೆ ಸ್ಥಳಾಂತರ
ಬೆಂಗಳೂರು : ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ ಅನಂದ ಮಾಮನಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಐಸಿಯು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ.
ಮಂಗಳವಾರ ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರು ಪೇರು ಉಂಟಾದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಯ ಐಸಿಯು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ ಎಂದು ಮೂಲಗಳಿಂದ ದೃಢಪಟ್ಟಿದೆ.
ಸಭಾಧ್ಯಕ್ಷ ಆನಂದ ಮಾಮನಿ ಅವರ ಆರೋಗ್ಯ ಸುಧಾರಿಸಲೆಂದು ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಬೇಗ ಗುಣಮುಖರಾಗಲೆಂದು ಎಲ್ಲರ ಪ್ರಾರ್ಥಣೆಯಾಗಿದೆ.