
ಡಿಕೆಶಿ ಸವಾಲಿಗೆ ತಿರುಗೇಟು ಕೊಟ್ಟರಾ..? ಗುಡ್ಡ ಕುಸಿತ ರಕ್ಷಣಾ ಕಾರ್ಯಾಚರಣೆಗೆ ಸೇನೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ನಿನ್ನೆ ಕುಮಾರಸ್ವಾಮಿ ಭೇಟಿ ನೀಡಿದ್ದನ್ನು ಡಿಕೆಶಿ ವ್ಯಂಗ್ಯಮಾಡಿದ್ದರು. ಸೇನೆಯನ್ನು ತರಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದರೆ ಹೇಳಬಹುದಿತ್ತು. ಕೇವಲ ಭೇಟಿ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು.
ಸಧ್ಯ ಡಿಕೆಶಿ ಆರೋಪಕ್ಕೆ ಟಕ್ಕರ್ ಕೊಡುವ ರೀತಿಯಲ್ಲಿ ಗುಡ್ಡ ಕುಸಿತ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಸ್ವತಃ ಸೇನೆಯನ್ನೇ ನಿಯೋಜನೆ ಮಾಡಲಾಗಿದೆ. ಈಗಾಗಲೇ ಸೇನೆಯ ವಾಹನಗಳು ಶಿರೂರು ಗುಡ್ಡ ಪ್ರದೇಶದತ್ತ ಬಂದಿವೆ.
ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಭೂ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿ ಕುಮಾರಸ್ವಾಮಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಡಿಕೆಶಿ ವಿರುದ್ಧ ಹರಿಹಾಯ್ದರು. ನಾನು, ಅಶೋಕ್ ಒಟ್ಟಿಗೆ ಬಂದಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದ್ದಾರೆ.
ನಿನ್ನೆ ಶಿರೂರ ಬಳಿ ಐದುಕಿಲೋಮೀಟರ್ ಹಿಂದೆಯೇ ತಡೆಗೋಡೆ ಇಟ್ಟು ಏನೂ ಚಿತ್ರೀಕರಣ ಮಾಡದ ರೀತಿ ಆದೇಶ ಮಾಡಿದ್ದರು. ನಾನು ಯಾರನ್ನೂ ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು.
ಪಾಪ ಡಿ.ಕೆ.ಶಿವಕುಮಾರ್ ಅವರು ಮಿಲಿಟರಿ ತರಬೇಕು ಎಂದು ಹೇಳಿದ್ದಾರೆ. ಈ ರಾಜ್ಯದಲ್ಲಿ ದರೋಡೆ ನಡೆಯುತ್ತಿದೆ. ಬೇರೆ ಅಭಿವೃದ್ಧಿ ಕೆಲಸಗಳಿಗಿಂತ ದರೋಡೆ ಟೆರರಿಸ್ಟ್ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿ ಕರೆ ತರಲು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.