ಹೆದ್ದಾರಿ ಮೇಲೆ ಗುಡ್ಡ ಕುಸಿತ ; ಏಳು ಜನರ ಸಾವು
ಅಂಕೋಲಾ : ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದ್ದು ಏಳು ಜನ ಮೃತಪಟ್ಟ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು ಈ ಸಂದರ್ಭದಲ್ಲಿ ಒಂಬತ್ತು ಜನ ನಾಪತ್ತೆಯಾಗಿದ್ದರು. ಸಧ್ಯ ಇದರಲ್ಲಿ ಏಳು ಜನ ಮೃತಪಟ್ಟಿದ್ದಾರೆ.
9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು. ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದ್ದು ಈಗಾಗಲೇ ತೆರವು ಕಾರ್ಯ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಕಣ್ಮರೆಯಾಗಿದ್ದ ಒಂಬತ್ತು ಜನರಲ್ಲಿ ಏಳು ಜನ ಮೃತಪಟ್ಟಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದರು.