ಬೆಳಗಾವಿ : ದಿಢೀರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕುತೂಹಲ ಮೂಡಿಸಿದ್ದ ರಮೇಶ್ ಕತ್ತಿ ಮುಂದೆ ಅವರ ಸ್ಥಾನಕ್ಕೆ ಯಾರು ಎಂಬ ಚರ್ಚೆ ಹುಟ್ಟುಹಾಕಿದೆ.

ಮೂಲಗಳ ಪ್ರಕಾರ ನಾಲ್ಕು ಜನ ನಿರ್ದೇಶಕರ ಮಧ್ಯೆ ತೀವ್ರ ಪೈಪೋಟಿ ಇದ್ದು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ‌ ಬಹುತೇಕ ಅಧ್ಯಕ್ಷ ಸ್ಥಾನ ಅಲಂಕರಿಸುವ ಸಾಧ್ಯತೆ‌ ಇದೆ.

ಬ್ಯಾಂಕ್ ಸೇರಿದಂತೆ ಜೊಲ್ಲೆ ಉದ್ಯೋಗ ಸಮೂಹದ ಮೂಲಕ ಗುರುತಿಸಿಕೊಂಡಿರುವ ಅಣ್ಣಾಸಾಹೇಬ್ ಜೊಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಏರುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.