ಲಿಂಗಾಯತ ವಿರೋಧಿ ಬಿಜೆಪಿಗೆ ಈ ಬಾರಿ ನಮ್ಮ ಮತ ಇಲ್ಲ : ಉಚ್ಚಾಟನೆ ವಿರುದ್ಧ ನೆಟ್ಟಿಗರ ಆಕ್ರೋಶ
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿದವರ ವಿರುದ್ಧ ಉಚ್ಚಾಟನೆ ಅಸ್ತ್ರ ಪ್ರಯೋಗವಾಗಿದ್ದು ಇದಕ್ಕೆ ವೀರಶೈವ ಲಿಂಗಾಯತ ಸಮುದಾಯ ಸಿಡಿದೆದ್ದಿದೆ. ಈ ಬಾರಿ ಬಿಜೆಪಿಗೆ ಮತ ನೀಡದಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗುತ್ತಿದೆ.
ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಡಾಯವೆದ್ದ ಲಿಂಗಾಯತ ಸಮುದಾಯದ ಮುಖಂಡರು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದರು. ಆದರೆ ಅವರ ವಿರುದ್ಧ ಜಿಲ್ಲಾ ಬಿಜೆಪಿ ಉಚ್ಚಾಟನೆ ಅಸ್ತ್ರ ಪ್ರಯೋಗ ಮಾಡಿದ್ದು ಬೆಳಗಾವಿ ಲಿಂಗಾಯತ ಸಮುದಾಯ ಆಕ್ರೋಶ ಹೊರಹಾಕಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಮತ ಚಲಾವಣೆ ಮಾಡದಂತೆ ಪೋಸ್ಟ್ ಹಾಕಲಾಗುತ್ತಿದೆ.
ಪ್ರಭಲ ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಅವಮಾನ ಮಾಡಿದ್ದು ಈ ಬಾರಿ ತಕ್ಕ ಉತ್ತರ ಕಲಿಸಬೇಕು ಎಂಬ ಅರ್ಥದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು ಭಿನ್ನಮತ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಮೊದಲಬಾರಿಗೆ ವೀರಶೈವ ಲಿಂಗಾಯತರು ಬಿಜೆಪಿ ವಿರುದ್ಧ ಬಹಿರಂಗವಾಗಿ ತಮ್ಮ ಆಕ್ರೋಶ ಹೊರ ಹಾಕುತಿದ್ದು. ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕು.
ಉಚ್ಚಾಟನೆಯಾದ ಬಿಜೆಪಿ ಸದಸ್ಯರು : ದೀಪಕ್ ಜಮಖಂಡಿ, ಶಿವಾನಂದ ಮುಗಳಿಹಾಳ, ಗಜೇಶ್ ನಂದಗಡಕರ, ಸಂಜಯ್ ಸವ್ವಾಶೇರಿ, ಜ್ಯೋತಿ ಭಾವಿಕಟ್ಟಿ, ಆರತಿ ಪಾಟೋಳೆ, ಶಿವಾನಂದ ಮುರಗೋಡ.