ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನ
ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಹಾಗೂ ಚಿತ್ರನಟಿ ಅಪರ್ಣಾ( 51) ಅವರು ವಿಧಿವಶರಾಗಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ಬನಶಂಕರಿ ನಿವಾಸದಲ್ಲಿ ನಿಧನರಾಗಿದ್ದಾರೆ.
ಕನ್ನಡದ ಮಸನದ ಹೂವು ಚಿತ್ರದ ಮೂಲಕ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದ ಇವರು ಚಂದನ ವಾಹಿನಿಯಲ್ಲಿ ಕೊಡುತ್ತಿದ್ದ ನಿರೂಪಣೆಯಿಂದ ಹೆಸರುವಾಸಿಯಾಗಿದ್ದರು.
ಸ್ಪಷ್ಟವಾಗಿದೆ ಕನ್ನಡ ಉಚ್ಚಾರಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಅಪರ್ಣಾ ಅವರು ತಮ್ಮದೇ ಅಭಿಮಾನಿಗಳ ಬಳಗ ಹೊಂದಿದ್ದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ –
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.