ಆಮ್ ಆದ್ಮಿಗೆ ರಾಜಕುಮಾರ : ಆಪ್ ನತ್ತ ಮುಖಮಾಡಿದ ಲಿಂಗಾಯತ ಮುಖಂಡರು
ಬೆಳಗಾವಿ : ಡೆಲ್ಲಿ ಬದಲಾ ಹೈ ಬೆಳಗಾವಿ ಬದಲೆಗಾ ಎಂಬ ಸ್ಲೋ ಗನ್ ಇಟ್ಟುಕೊಂಡು ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿ ಅಗ್ನಿ ಪರೀಕ್ಷೆ ಎದುರಿಸಿದ್ದ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ನೀಡಿತ್ತು. ಬಳಿಕ ಪಂಚರಾಜ ಚುನಾವಣೆಯಲ್ಲಿ ಪಂಜಾಬ್ ನಲ್ಲಿ ಅಧಿಕಾರ ಹಿಡಿದ ಬಳಿಕ ಕರ್ನಾಟಕದಲ್ಲಿಯೂ ಆಪ್ ಆದ್ಮಿ ಹವಾ ಜೋರಾಗಿದೆ. ಬಿಜೆಪಿ ತೊರೆದು ಆಪ್ ಸೇರ್ಪಡೆಯಾದ ಬಳಿಕ ರಾಜಕುಮಾರ ಟೋಪಣ್ಣವರ ಉತ್ತರ ವಲಯದ ಉಸ್ತುವಾರಿ ವಹಿಸಿಕೊಂಡ ನಂತರ ರಾಷ್ಟ್ರೀಯ ಪಕ್ಷದ ಪ್ರಭಾವಿ ಲಿಂಗಾಯತ ಸಮುದಾಯದ ಲೀಡರ್ಸ್ ಆಪ್ ಗೆ ಸೇರ್ಪಡೆಯಾಗುತ್ತಿದ್ದಾರೆ.
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಕ್ರಿಯವಾಗಿರುವ ಆಮ್ ಆದ್ಮಿ ಪಾರ್ಟಿ ಸಂಘಟಿಸಲು ಟೊಂಕ ಕಟ್ಟಿ ನಿಂತಿರುವ ಆಪ್ ಉತ್ತರ ವಲಯದ ಉಸ್ತುವಾರಿ ರಾಜಕುಮಾರ ಟೋಪಣ್ಣವರ ನಿರಂತರವಾಗಿ ಪಕ್ಷ ಸಂಘಟನೆ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ಈ ಭಾಗದಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿದ್ದ ಲಿಂಗಾಯತ ಮುಖಂಡರು ಟೋಪಣ್ಣವರ ನೇತೃತ್ವದ ಆಪ್ ಸೇರ್ಪಡೆಯಾಗುತ್ತಿರುವುದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷ ನಿರ್ಣಾಯಕ ಪಾತ್ರ ವಹಿಸುವುದು ನಿಶ್ಚಿತ ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜಕೀಯ, ಹೋರಾಟ, ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವ ಟೋಪಣ್ಣವರ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿಯೂ ಮಂಚೂಣಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನ ಭ್ರಷ್ಟಾಚಾರದ ಆಡಳಿತ ಜನರ ಮುಂದೆ ತರುವ ನಿಟ್ಟಿನಲ್ಲಿ ಆಪ್ ಸೇರ್ಪಡೆಯಾಗಿರುವ ಅವರು ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೋಡಗಿದ್ದಾರೆ. ಬೆಳಗಾವಿ ತಾಲೂಕಿನಲ್ಲಿ ಲಿಂಗಾಯತ ಸಮುದಾಯದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಲೆ ಸಿಗುತ್ತಿಲ್ಲ. ಹುಕ್ಕೇರಿ ಹಾಗೂ ಚಿಕ್ಕೋಡಿ ಭಾಗದ ಲಿಂಗಾಯತ ನಾಯಕರು ಸಮುದಾಯವದ ಏಳಿಗೆ ಬಯಸುತ್ತಿಲ್ಲ. ಈ ನಿಟ್ಟಿನಲ್ಲಿ ಟೋಪಣ್ಣವರ ಸಮ್ಮುಖದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಲಿಂಗಾಯತ ಕಾರ್ಯಕರ್ತರು ಆಪ್ ಸೇರ್ಪಡೆಯಾಗುತ್ತಿದ್ದಾರೆ.
ಬರುವ ಶಿಕ್ಷಣ ಹಾಗೂ ಪದವಿದರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಚುನಾವಣೆಗೆ ಸಿದ್ಧತೆ ನಡೆಸಿರುವ ಆಪ್ ಬೆಳಗಾವಿ, ಬಾಗಲಕೋಟ, ವಿಜಯಪುರ ವ್ಯಾಪ್ತಿಯಲ್ಲಿ ಬಿರುಸಿನ ಸಿದ್ಧತೆ ನಡೆಸಿದೆ. ಈ ಚುನಾವಣೆಯ ಸಿದ್ಧತೆ ತಾಪಂ, ಜಿಪಂಗೂ ಸಹಕಾರವಾಗುವುದು ನಿಶ್ಚಿತ.