ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಗೆ ಹೊಸ ಅಭ್ಯರ್ಥಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಕೀಲರು ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು, ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಅವಶ್ಯಕ ಪತ್ರಗಳ ದೃಢೀಕೃತ ನಕಲುಗಳನ್ನು ಲಗತ್ತಿಸಿ ಸೆಪ್ಟೆಂಬರ್ 20 ರ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಳಿತ ಶಾಖೆಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅವಧಿ ನಂತರ ಸ್ವೀಕೃತ ವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.