Select Page

Advertisement

ಸಿಎಂ ಸ್ಥಾನದಿಂದ ಕೆಳಗಿಳಿದ ಕೇಜ್ರಿವಾಲ್ ; ನೂತನ ಸಿಎಂ ಇವರೇ ನೋಡಿ

ಸಿಎಂ ಸ್ಥಾನದಿಂದ ಕೆಳಗಿಳಿದ ಕೇಜ್ರಿವಾಲ್ ; ನೂತನ ಸಿಎಂ ಇವರೇ ನೋಡಿ

ನವದೆಹಲಿ : ನಕಲಿ ಸಾರಾಯಿ ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬೇಲ್ ಮೇಲೆ ಹೊರಬಂದ ನಂತರ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆ ಸ್ಥಾನಕ್ಕೆ ಹೊಸಬರ ಆಯ್ಕೆ ಮಾಡಿದ್ದಾರೆ.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆ ಆಗಿದ್ದಾರೆ. ದೆಹಲಿಯ ಮೂರನೇ ಮಹಿಳಾ ಸಿಎಂ ಎಂಬ ಖ್ಯಾತಿಗೂ ಅತಿಶಿ ಅವರು ಪಾತ್ರರಾಗುವ ಮೂಲಕ ಕಳೆದ ಹತ್ತು ವರ್ಷಗಳಿಂದ ದೆಹಲಿ ಗದ್ದುಗೆ ಮೇಲೆ ಕುಳಿತಿದ್ದ ಕೇಜ್ರಿವಾಲ್ ಕೆಳಗಿಳಿದಿದ್ದಾರೆ.

ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ನಂತರ ಮೂರನೇ ಮಹಿಳೆಯಾಗಿ ಅತಿಶಿ ಅವರು ದೆಹಲಿ ಸಿಎಂ ಹುದ್ದೆ ಅಲಂಕರಿಸುತ್ತಿದ್ದಾರೆ. ದೆಹಲಿ ವಿವಿಯಲ್ಲಿ ಇತಿಹಾಸ ಪದವಿ ಪಡೆದಿರುವ ಇವರು, ಆಕ್ಸ್‌ಫರ್ಡ್ ಯುನಿವರ್ಸಿಟಿಯಲ್ಲಿ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

2013 ರಿಂದ ಆಮ್ ಆದ್ಮಿ ಪಕ್ಷದ ನೀತಿ, ನಿಯಮ ರೂಪಿಸುವಲ್ಲಿ ಇವರ ಪಾತ್ರ ಬಹುಮುಖ್ಯವಾಗಿದೆ. ದೆಹಲಿಯ ಶಿಕ್ಷಣ ಕ್ಷೇತ್ರದ ಸುಧಾರಣೆಯಲ್ಲಿ ಮಹತ್ವದ ಕಾರ್ಯ ಮಾಡಿದ್ದಾರೆ‌. 2015 ರಿಂದ ಶಿಕ್ಷಣ ಸಚಿವ ಮನೀಷ್ ಸಿಸೊಡಿಯಾಗೆ ಸಲಹೆಗಾರರಾಗಿ ಕರ್ತವ್ಯ ನಿರ್ವಹಣೆ.

2019 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು ಪೂರ್ವ ಹೆಹಲಿ ಕ್ಷೇತ್ರದಲ್ಲಿ ಸೋಲು ಅನುಭವಿಸುತ್ತಾರೆ. ಆದರೆ 2020 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಜಿ ಕ್ಷೇತ್ರದಿಂದ 11 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ.

2022 ರಲ್ಲಿ ದೆಹಲಿಯ ಜಲಸಚಿವೆಯಾಗಿ ಅಧಿಕಾರ ಸ್ವೀಕರಿಸುವ ಅತಿಶಿ ಅವರು ಸಧ್ಯ ದೆಹಲಿ ಗದ್ದುಗೆ ಏರುವ ಮಟ್ಟಿಗೆ ತಮ್ಮ ಯಶಸ್ಸು ಸಾಧಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!