Select Page

Advertisement

ಸೇನಾ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಸೇನಾ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

BELAGAVI : ಕಳೆದೊಂದು ವರ್ಷದಿಂದ ಸೈನ್ಯಗೆ ಸೇರುಗ ಮಕ್ಕಳು ತರಬೇತಿ ಪಡೆಯುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ನೇಮಕ ಮಾಡಿಕೊಳ್ಳುತ್ತಿಲ್ಲ. ಕೂಡಲೇ ಎಲ್ಲಾ ಮಕ್ಕಳಿಗೆ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಶುಕ್ರವಾರ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿದರು.

ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದ ಕೇಂದ್ರ ಸರಕಾರ ಕಳೆದ‌ ಎರಡೂ ವರ್ಷಗಳಿಂದ ಭಾರತೀಯ ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿಲ್ಲ. ಇದರಿಂದ ವಿದ್ಯಾರ್ಥಿಗಳ ವಯಸ್ಸು ಮೀರುತ್ತಿದೆ. ಸರಕಾರಕ್ಕೆ ಸೈನಿಕರ ಬಗ್ಗೆ ಕಳಕಳಿ ಇದ್ದರೇ ಆದಷ್ಟು ಬೇಗ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದರು.

ಬೆಳಗಾವಿ ‌ಜಿಲ್ಲೆಯಲ್ಲಿ ಸುಮಾರು ನಾಲ್ಕು ಸಾವಿರ ಜನರು ಸೇನೆಗೆ ಸೇರಲು ಸಿದ್ಧರಿದ್ದಾರೆ. ಆದರೆ ಕೇಂದ್ರ ಸರಕಾರದ ನಿರ್ಲಕ್ಷ್ಯ ಮನೋಭಾವದಿಂದ ಸೇನೆ ಸೇರಬಯಸುವವರು ಮನೆಯಲ್ಲಿ ದೈಹಿಕ ತರಬೇತಿ ನಡೆಸಿದ್ದಾರೆ. ಇವರ ವಯೋಮಿತಿ ಹೆಚ್ಚಿಸಿ ಸೇನೆ ಭರ್ತಿ ಹಾಗೂ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಸಪ್ಪ ತಳವಾರ, ಸುರೇಶ, ಈರಣ್ಣಾ ಹಿರೇಮಠ, ಕುಮಾರ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!