ಲೈಂಗಿಕ ದೌರ್ಜನ್ಯ ಆರೋಪ ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ವಿರುದ್ಧ ಎಫ್ಐಆರ್
ಪುತ್ತೂರು : ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ ಪುತ್ತಿಲ್ಲ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ 2023 ರಲ್ಲಿ ಅರುಣ್ ಕುಮಾರ್ ಪುತ್ತಿಲ್ಲ ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆಯೊಬ್ಬಳು ಆರೋಪಿಸಿ ಎಫ್ಐಆರ್ ದಾಖಲಿಸಿದ್ದಾಳೆ.
ಮಹಿಳೆ ಕೊಟ್ಟ ದೂರಿನ ಅನ್ವಯ ಪುತ್ತಿಲ್ಲ ವಿರುದ್ಧ ಐಪಿಸಿ ಸೆಕ್ಷನ್ – 417, 354 ಎ, ಮತ್ತು 506 ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸಧ್ಯ ಬಿಜೆಪಿ ಪಕ್ಷದಲ್ಲಿರುವ ಅರುಣ್ ಕುಮಾರ್ ಪುತ್ತಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಅಷ್ಟೇ ಅಲ್ಲದೆ ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರಮುಖ ಕಾರಣರಾಗಿದ್ದರು. ಸಧ್ಯ ಇವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.