ಅಥಣಿ : ಗ್ಯಾಸ್ ಸಿಲಿಂಡರ್ ಸ್ಪೋಟದ ಭೀಕರತೆಗೆ ಮನೆ ಛಿದ್ರಗೊಂಡಿದ್ದು ದಂಪತಿಗಳಿಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡವರು ಧನಪಾಲ ಹಾಗೂ ಅನಸೂಯಾ ಕಾಂಬಳೆ. ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಹೊತ್ತಿಸುವ ವೇಳೆ ಸ್ಫೋಟ ಸಂಭವಿಸಿದೆ.

ಸ್ಫೋಟದ ಪರಿಣಾಮ ಮನೆಯೊಳಗಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.