ಅಥಣಿ : ಕಲ್ಲು, ಕಟ್ಟಿಗೆಯಿಂದ ಹೊಡೆದಾಟ ; ಆಸ್ಪತ್ರೆಗೆ ದಾಖಲು – VIDEO
ಅಥಣಿ : ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿಕೊಂಡು ಇಬ್ಬರು ವ್ಯಕ್ತಿಗಳು ಆಸ್ಪತ್ರೆ ಸೇರಿದ ಘಟನೆ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶೇಕರ್ ಹಾಗೂ ವಿಶ್ವನಾಥ ಎಂಬುವವರು ಪರಸ್ಪರ ಹೊಡೆದಾಡಿಕೊಂಡವರು. ಇಬ್ಬರ ಜಗಳಕ್ಕೆ ನಿಖರ ಕಾರಣವೂ ತಿಳಿದುಬಂದಿಲ್ಲ.
ಕಟ್ಟಿಗೆ ಹಾಗೂ ಕಲ್ಲಿನಿಂದ ಪರಸ್ಪರ ಹೊಡೆದಾಡೊಂಡ ಇವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡ ಶೇಖರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.
ಸಧ್ಯ ಇಬ್ಬರ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


