Video-ಅಥಣಿ ವಿದ್ಯುತ್ ಕೇಂದ್ರದಲ್ಲಿ ಅಗ್ನಿ ಅವಘಡ
ಅಥಣಿ : ಪಟ್ಟಣದ 110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದಲ್ಲಿ ವಿದ್ಯುತ್ ಪರಿಕರ ಸುಟ್ಟು ಕರಕಲಾಗಿವೆ.
ಅಥಣಿ – ವಿಜಯಪೂರ ರಸ್ತೆಗೆ ಹೊಂದಿಕೊಂಡ ವಿದ್ಯುತ್ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.