ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಇಲೆಕ್ಟ್ರಿಕಲ್ ಬೈಕ್ ತುಂಬಿದ್ದ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಥಣಿ – ಗೋಕಾಕ್ ರಸ್ತೆಯ ಸಂಕೋನಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



