ಶಾಲಾ ಬಸ್ ಪಲ್ಟಿ ; ಅಪಾಯದಿಂದ ವಿದ್ಯಾರ್ಥಿಗಳು ಪಾರು
ಅಥಣಿ : ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಖಾಸಗಿ ಶಾಲೆಗೆ ಸೇರಿದ್ದ ಬಸ್ ಪಲ್ಟಿಯಾಗಿದ್ದು ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 10 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು. ಅದೃಷ್ಟವಶಾತ್ ಬಸ್ ಉರುಳಿ ಬಿದ್ದರು ಯಾವುದೇ ಹಾನಿ ಸಂಭವಿಸಿಲ್ಲ.
ತಾಲೂಕಿನ ಹಲವೆಡೆ ಖಾಸಗಿ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆ ಎತ್ತಿದ್ದು ಬಸ್ ಚಾಲನೆ ಮಾಡುವವರಿಗೆ ಯಾವುದೇ ಲಗಾಮು ಇಲ್ಲದಂತಾಗಿದೆ. ಓವರ್ ಸ್ಪೀಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದು ಮಕ್ಕಳು ಕೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾಗಿದೆ.
ಈ ಕುರಿತು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದರೆ ಮಾತ್ರ ಮುಂದೆ ಆಗುವ ಅಪಾಯಗಳನ್ನು ತಡೆಗಟ್ಟಬಹುದು. ಪದೇ ಪದೇ ಈ ರೀತಿಯ ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿರುವುದು ಹೊಸದಲ್ಲ.