
ಅಥಣಿಯ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಅಥಣಿ: ವಿಪತ್ತು ಹಾಗೂ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಥಣಿಯ ಅಗ್ನಿಶಾಮಕ ಸಿಬ್ಬಂದಿ
ಅನಿಲ ಬಡಚಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಅಗ್ನಿಶಾಮಕ ಸಿಬ್ಬಂದಿ ಅನಿಲ ಬಡಚಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಅಗ್ನಿ ಅವಘಡ, ವಿಪತ್ತು ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ಗೌರವ ನೀಡುತ್ತದೆ.