
ಅಥಣಿ : ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಓರ್ವ ಸಾವು

ಅಥಣಿ : ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಳಿ ನಡೆದಿದೆ .
ಜಮಖಂಡಿ ಯಿಂದ ಸ್ವ ಗ್ರಾಮ ಚಮಕೇರಿಗೆ ಬರುವ ಸಂದರ್ಭದಲ್ಲಿ ಮಾರ್ಗದ ಮಧ್ಯೆ ಸವದಿ ಗ್ರಾಮದ ಬಳಿ ಬೈಕ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಚಮಕೇರಿ ಗ್ರಾಮದ ನಿಂಗಪ್ಪ ದುಂಡಪ್ಪ ಮಂಗಳೂರು (65) ಎಂಬಾತ ಸಾವನ್ನಪ್ಪಿರುವ ಮೃತ ದುರ್ದೈವಿ.
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.