Select Page

Advertisement

ಅಥಣಿ ಬಸ್ ಅಪಘಾತದಿಂದ ನನ್ನ ಮನ ಕಲಕಿದೆ : ಸಚಿವ ರಾಮಲಿಂಗಾರೆಡ್ಡಿ

ಅಥಣಿ ಬಸ್ ಅಪಘಾತದಿಂದ ನನ್ನ ಮನ ಕಲಕಿದೆ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸರ್ಕಾರಿ ಬಸ್ ಹರಿದು ಬಾಲಕ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಿಜಕ್ಕೂ ಈ ಘಟನೆ ನನ್ನ ಮನಕಲಕಿದೆ. ಜೀವ ಕಳೆದುಕೊಂಡ ಅಮಾಯಕ ಬಾಲಕನದ್ದು ತಪ್ಪಿಲ್ಲ. ಆ ಸರ್ಕಾರಿ ಬಸ್ ಚಾಲಕ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಣೆ ಮಾಡುತ್ತಿದ್ದ ಅವನದೇ ಇದರಲ್ಲಿ ತಪ್ಪಿದೆ.

ನಮ್ಮ ಮತ ಇಲಾಖೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ವಹಿಸಿದವರನ್ನು ಮುಲಾಜಿಲ್ಲದೆ ಅಮಾನತು ಮಾಡುತ್ತೇವೆ. ಈ ರೀತಿಯ ಅವಘಡಗಳಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ನೀಡುವ ಕುರಿತು ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಯಚೂರು ಬಸ್ ಅವಘಡದಲ್ಲಿ ಎರಡೂ ವಾಹನಗಳ ಚಾಲಕರು ನಿರ್ಲಕ್ಷ್ಯ ತೋರಿದ್ದರು. ಆದರೆ ಈ ಘಟನೆಯಲ್ಲಿ ಬಸ್ ಚಾಲಕನ ಬೇಜವಾಬ್ದಾರಿಯೇ ಎದ್ದು ಕಾಣುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬದ ದುಖಃದಲ್ಲಿ ನಾನು ಭಾಗಿಯಾಗುವೆ‌ ಎಂದು ರಾಮಲಿಂಗಾರೆಡ್ಡಿ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!